ಚಿತ್ರದುರ್ಗ : ಯುವನಿಧಿ ಯೋಜನೆಯಡಿ 2022-23, 2023-24 ಹಾಗೂ 2024-25 ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲಮೋ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಯುವನಿಧಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ತ್ರೈಮಾಸಿಕಕ್ಕೆ ಬದಲಾಗಿ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945587060, 7019755147 ಕರೆ ಮಾಡುವಂತೆ ಅಥವಾ ಸ್ಟೇಡಿಯಂ ರಸ್ತೆಯ ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

































