ಆಂಧ್ರಪ್ರದೇಶ : ವಿದ್ಯಾರ್ಥಿನಿಯರಿಂದ ಕಾಲು ಮಸಾಜ್ ಮಾಡಿಸಿಕೊಂಡ ಶಿಕ್ಷಕಿಯನ್ನ ಅಮಾನತು ಮಾಡಿರುವ ಘಟನೆ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲು ಮಸಾಜ್ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ ಆಂಧ್ರಪ್ರದೇಶ ಸರ್ಕಾರ ಮಂಗಳವಾರ ಶಾಲಾ ಶಿಕ್ಷಕಿಯನ್ನು ಅಮಾನತುಗೊಳಿಸಿದೆ. ಶಿಕ್ಷಕಿಯನ್ನು ವೈ ಸುಜಾತಾ ಎಂದು ಗುರುತಿಸಲಾಗಿದೆ.
ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಬಂಡಪಲ್ಲಿ ಗ್ರಾಮದ ಶಾಲೆಯಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಆಕೆಯ ಕಾಲು ಮಸಾಜ್ ಮಾಡುತ್ತಿರುವಾಗ ಸುಜಾತಾ ತನ್ನ ಕಾಲುಗಳನ್ನು ಚಾಚಿ ಫೋನ್ನಲ್ಲಿ ಮಾತನಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಸುಜಾತಾ ಅವರು ಸರ್ಕಾರಿ ಸೂಚನೆಗಳನ್ನು ಹಲವು ಬಾರಿ ಉಲ್ಲಂಘಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

































