ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬAಧಿಸಿದAತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಪತಿಯಿಂದ ದೂರವಾಗಿ ಮಹಿಳೆ ಪ್ರಿಯಕರನ ಜೊತೆ ವಾಸಿಸುತ್ತಿದ್ದಳು. ಮಹಿಳೆಯ ಪ್ರೇಮಿ ಎರಡು ವರ್ಷಗಳಿಂದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ತನ್ನ ಮಗಳ ಮೇಲೆ ಅತ್ಯಾಚಾರ ಎಸಗಲು ಆಕೆಯ ತಾಯಿಯೇ ಸಾಥ್ ನೀಡಿದ್ದಳು.
ಇಬ್ಬರಿಗೂ ಪ್ರತಿ ವಿಭಾಗದ ಅಡಿಯಲ್ಲಿ 40 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡವನ್ನು ನ್ಯಾಯಾಲಯವು ವಿಧಿಸಿದೆ. ದಂಡದ ಮೊತ್ತವನ್ನು ಪಾವತಿಸದಿದ್ದರೆ, ಇಬ್ಬರೂ ಹೆಚ್ಚುವರಿಯಾಗಿ 20 ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸುವಂತೆ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಶ್ರಫ್ ಎ.ಎಂ. ಆದೇಶ ಹೊರಡಿಸಿದ್ದಾರೆ. ಪೋಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದೋಷಿಗಳು ಎಂದು ತೀರ್ಪು ನೀಡಲಾಗಿದೆ.
ಪೋಕ್ಸೊ ಕಾಯ್ದೆಯಡಿ ಯಾವುದೇ ಮಹಿಳೆಗೆ ನೀಡಲಾಗುವ ಅತ್ಯಂತ ಕಠಿಣ ಶಿಕ್ಷೆ ಇದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

































