2025-26ನೇ ಶಿಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಪ್ರಿಲ್ 25ರಿಂದ ಮೇ 9ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದೆ.
ದ್ವಿತೀಯ ಪಿಯುಸಿಗೆ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್17ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಫಲಿತಾಂಶದಿಂದ ತೃಪ್ತರಾಗದವರು ಪರೀಕ್ಷೆ-2ಅನ್ನು ಬರೆಯಬಹುದಾಗಿದೆ.
ಪರೀಕ್ಷೆ-2ರ ವೇಳಾಪಟ್ಟಿ ಇಂತಿದೆ:
ಎಪ್ರಿಲ್ 25: ಕನ್ನಡ, ಅರಬಿಕ್
ಎಪ್ರಿಲ್ 27: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
ಎಪ್ರಿಲ್ 28: ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಎಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
ಎಪ್ರಿಲ್ 30: ಅರ್ಥಶಾಸ್ತ್ರ
ಮೇ 2: ಇತಿಹಾಸ, ರಸಾಯನಶಾಸ್ತ್ರ
ಮೇ 4: ಇಂಗ್ಲಿಷ್
ಮೇ 5: ಹಿಂದಿ
ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ
ಮೇ 7: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 8: ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 9: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮೇ 9 (ಮಧ್ಯಾಹ್ನ): ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಅರೋಗ್ಯ ರಕ್ಷಣೆ, ಬ್ಯೂಟಿ ಆಂಡ್ ವೆಲ್ನೆಸ್.

































