ಧಾರವಾಡ: ಮಹಾರಾಷ್ಟ್ರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೂ ನಿರ್ಬಂಧ ಹೇರಲಾಗಿದೆ.!
ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನ. 7ರಂದು ನಡೆಯಲಿರುವ ಸಹಜಾನಂದ ಸಪ್ತಾಹಕ್ಕೆ ಕನ್ಹೇರಿ ಮಠದ ಸ್ವಾಮೀಜಿ ಆಗಮಿಸಬೇಕಿತ್ತು. ಆದರೆ, ಲಿಂಗಾಯತ ಮಠಾಧೀಶರು, ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕನ್ಹೇರಿ ಮಠದ ಸ್ವಾಮೀಜಿ ಧಾರವಾಡಕ್ಕೆ ಬರಲು ಬಿಡುವುದಿಲ್ಲ. ಒಂದು ವೇಳೆ ಬಂದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು.
ಹಾಗಾಗಿ ಜಿಲ್ಲಾಡಳಿತ ನ.5 ರಿಂದ ಜ.3ರವರೆಗೆ ಧಾರವಾಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿದೆ.!
































