ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯು ವಿದ್ಯಾರ್ಥಿಗಳಿಗೆ ವಿಸ್ತರಿಸುವ ಪ್ಲ್ಯಾನ್ ಮಾಡಲಾಗಿದೆ. ಸರ್ಕಾರಿ ಕಾಲೇಜುಗಳ ಪಿಯು ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ನವಂಬರ್ 14 ರಂದು ಈ ಬಗ್ಗೆ ಸಿಎಂ ಘೋಷಿಸುವ ಸಾಧ್ಯತೆ ಇದೆ.
ಸರಕಾರಿ ಮತ್ತು ಅನುದಾನಿತ ಪಿಯು ಕಾಲೇಜುಗಳಿಗೆ ವಿಸ್ತರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಅವರಿಂದ ಮಹತ್ವದ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಸದ್ಯ 1ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಭಾಗ್ಯ ಲಭಿಸಿದೆ. ಈಗ ಹೊಸದಾಗಿ ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಊಟ ನೀಡಲು ಚಿಂತನೆ ಇದೆ. ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಸರ್ಕಾರಿ ಪಿಯು ವಿದ್ಯಾರ್ಥಿಗಳಿದ್ದಾರೆ. ಗ್ರಾಮೀಣ ಭಾಗದಲ್ಲೇ ಅತಿ ಹೆಚ್ಚು ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಬಂದ್ರೆ ಬಹಳಷ್ಟು ಸಹಾಯಕ ಆಗಲಿದೆ.
































