ಬೆಂಗಳೂರು : ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು ಎಂದು ಗೃಹ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಇದು ನಾನ್‌ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ” ಎಂದರು.
“ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನವಾಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚಿಸುತ್ತೇವೆ” ಎಂದು ಹೇಳಿದರು.
“ಇದು ಹಳೇ ವಿಡಿಯೋ ಎನ್ನುತ್ತಾರೆ. ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.
































