ಮೈಸೂರು :ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮೈಸೂರಿನ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.
DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.
ಪೊಲೀಸ್ ಅಧಿಕಾರಿಗಳಾಗಳು ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು
ಅಪರಾಧಿಗಳು, ರಿಯಲ್ ಎಸ್ಟೇಟ್, ರೌಡಿಗಳನ್ನು ಹೊರತುಪಡಿಸಿ ಪೊಲೀಸರು ಸಾರ್ವಜನಿಕರ ಜೊತೆ ಉತ್ತಮವಾಗಿ ವರ್ತಿಸಬೇಕು. ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮಿತಿ ರಚಿಸಲಾಗಿದೆ ಎಂದರು.
ಗ್ರೇಟರ್ ಮೈಸೂರು ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ. ಇನ್ನಷ್ಟು ಸಮಗ್ರ ಚರ್ಚೆ ಬಳಿಕ ಕ್ಯಾಬಿನೆಟ್ ನಲ್ಲಿ ಇಟ್ಟು ಅಲ್ಲೂ ಚರ್ಚಿಸಲಾಗುವುದು. ಕ್ಯಾಬಿನೆಟ್ ತೀರ್ಮಾನದಂತೆ ನಿರ್ಧಾರ ಮಾಡಲಾಗುವುದು ಎಂದರು.
ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ
ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪರ‍್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಎಂದು ತಿಳಿಸಿದ್ದೇನೆ.
ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು
ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರ‍್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿರಲಿಲ್ಲ. “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲ. ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ ಎಂದು ಸೂಚಿಸಿದ್ದೇನೆ. ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಲು ಸೂಚಿಸಿದ್ದೇನೆ. ಎಂದರು.
15 ರಂದು ದೆಹಲಿಗೆ
ಪಕ್ಷದ ಹಿರಿಯ ನಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ಹೈ ಕಮಾಂಡ್ ಸಯ ಕೊಟ್ಟರೆ ಭೇಟಿ ಆಗ್ತೀನಿ ಅಷ್ಟೆ. ಇನ್ನೂ ಹೈಕಮಾಂಡ್ ಸಮಯ ಕೇಳಿಲ್ಲ.





























