ನವದೆಹಲಿ : ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಮುಗಿದಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.
ಸದ್ಯ ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದೆ. ಬೆಳಗ್ಗೆ 9 ಗಂಟೆಯ ಟ್ರೆಂಡ್ ವೇಳೆ ಎನ್ಡಿಎ 147, ಮಹಾಘಟಬಂಧನ್ 89, ಜನಸೂರಜ್ 4, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ತಿಳಿದುಬಂದಿದೆ.
ಅಂಚೆ ಮತ ಎಣಿಕೆಯಿಂದಲೂ ಎನ್ಡಿಎ ಮುನ್ನಡೆ ಸಾಧಿಸಿತ್ತು. ಇದೇ ಟ್ರೆಂಡ್ ಮುಂದುವರಿಯುತ್ತಲೇ ಇದೆ. ಆರಂಭಿಕ ಮುನ್ನಡೆ ಸಾಧಿಸುತ್ತಿದ್ದಂತೆ ಎನ್ಡಿಎ ಪಕ್ಷದಲ್ಲಿ ಸಂಭ್ರಮ ಮನೆ ಮಾಡಿದೆ. ಮಹಾಘಟಬಂಧನ್ ಪೈಕಿ ಆರ್ಜೆಡಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ.
ನವೆಂಬರ್ 6 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ 18 ಜಿಲ್ಲೆಗಳ 121 ಸ್ಥಾನಗಳು ಮತ್ತು ನವೆಂಬರ್ 11 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 20 ಜಿಲ್ಲೆಗಳ 122 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.































