ಚೆನ್ನೈ: ತಾಂಬರಂ ಬಳಿ ತರಬೇತಿ ಕಾರ್ಯಾಚರಣೆಯ ವೇಳೆ ಭಾರತೀಯ ವಾಯುಪಡೆಯ PC-7 ಪಿಲಾಟಸ್ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ.
ವಿಮಾನವು ಇಂದು (ನ.14) ಮಧ್ಯಾಹ್ನ 2 ಗಂಟೆ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತಗೊಂಡ ವಿಮಾನದಿಂದ ಪೈಲಟ್ ಸುರಕ್ಷಿತವಾಗಿ ಎಜೆಕ್ಟ್ ಆಗಿದ್ದಾರೆ. ಪೈಲಟ್ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ ಎಂದು IAF ಅಧಿಕಾರಿಗಳು ತಿಳಿಸಿದ್ದಾರೆ.
PC-7 ತಾಂಬರಂ ವಾಯುನೆಲೆಯ ಬಳಿ ಪತನಗೊಂಡಾಗ ತರಬೇತಿ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಜನವಸತಿ ಇಲ್ಲದ ಸ್ಥಳದಲ್ಲಿ ವಿಮಾನ ಪತನಗೊಂಡಿದ್ದರಿಂದ ಜನರಿಗೆ ಯಾವುದೇ ಹಾನಿಯಾಗಿಲ್ಲ. ವಿಮಾನ ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲು ವಾಯುಪಡೆಯ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
































