ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಸಂಯೋಜಿತ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪಿಜಿ ಸಿಇಟಿ ಮೂಲಕ ಭರ್ತಿಯಾಗದೇ ಖಾಲಿ ಉಳಿದಿರುವ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ಸೀಟುಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 18 ರಿಂದ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.davanagereuniversity.ac.in ನಲ್ಲಿ ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
































