ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿದೆ.
ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಮೃತ ಮಹಿಳೆ. ಈಕೆ ಪತಿಯಿಂದ ದೂರವಾಗಿ 8 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಬೇಲೂರು ಠಾಣೆಯ ಪೊಲೀಸರು, ಶ್ವಾನದಳ, ಸೋಕೊ ಟೀಂ ಭೇಟಿ ನೀಡಿ, ಪರಿಶೀಲಿಸಿದೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
































