ಚಿತ್ರದುರ್ಗ: ಮನೆಯ ಹೆಣ್ಣು ಮಕ್ಕಳಂತೆ ತಾವು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿಯೂ ಮಹಿಳೆಯರನ್ನು ಸಹೋದರಿಯರಂತೆ ರಕ್ಷಣೆ ಮಾಡುವ ಹಾಗೂ ಅವರನ್ನು ಗೌರವಿಸುವ ಮನೋಭಾವ ಬೆಳೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಕುರಿತು ಅಂತರಾಷ್ಟ್ರೀಯ ವಿರೋಧಿ ದಿನದ ಅಂಗವಾಗಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ (ವಿರೋಧ, ನಿಬಂರ್ಧನೆ ಹಾಗೂ ನಿವಾರಣೆ) ಕಾಯ್ದೆ 2013ರ ಕುರಿತು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಅಧ್ಯಕ್ಷರುಗಳಿಗೆ ಮಂಗಳವಾರ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಪ್ರಮಾಣ ಶೇ.18 ರಿಂದ 41ಕ್ಕೆ ಏರಿಕೆಯಾಗಿದೆ. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸುವ ಜವಾಬ್ದಾರಿ ಉದ್ಯೋಗದಾತರ ಮೇಲಿದೆ ಎಂದು ತಿಳಿಸಿದ ಅವರು, ತಂತ್ರಜ್ಞಾನ ಮುಂದುವರೆದಂತೆ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಮೇಲೆ ಡಿಜಿಟಲ್ ಹಿಂಸಾಚಾರ, ಶೋಷಣೆ, ದೌರ್ಜನ್ಯ ನಡೆಯುತ್ತಿದೆ. ಹಾಗಾಗಿ ಡಿಜಿಟಲ್ ಹಿಂಸಾಚಾರದಿಂದ ರಕ್ಷಣೆ ಪಡೆಯಬೇಕಿದ್ದು, ಮಹಿಳೆಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್. ವಿಜಯ್ ಕುಮಾರ್ ಮಾತನಾಡಿ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಸರ್ಕಾರಿ ಕಚೇರಿ, ಖಾಸಗಿ, ಶಾಲಾ-ಕಾಲೇಜು, ಹೋಟೆಲ್ ಸೇರಿದಂತೆ ಒಬ್ಬ ಮಹಿಳೆ ಕಾರ್ಯನಿರ್ವಹಿಸುತ್ತಿದರೂ ಸಹ, ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಮಾಡಲಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಡೆದರೆ ಆಂತರಿಕ ದೂರು ನಿವಾರಣಾ ಸಮಿತಿಯು ದೂರು ಪಡೆದು, ಸಮಿತಿಯಲ್ಲಿ ಸತ್ಯಾಸತ್ಯತೆ ಪರಿಶೀಲಿಸಿ, ಜಿಲ್ಲಾ ಸಮಿತಿಗೆ ವರದಿ ಸಲ್ಲಿಸಬೇಕು. ಜಿಲ್ಲಾ ಸಮಿತಿಯು ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಕಳುಹಿಸಲಿದೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ಮಹಿಳಾ ದೌರ್ಜನ್ಯ ತಡೆಗೆ ಕಾನೂನು ರೂಪಿಸಿದ್ದೇವೆ, ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಮಾಡಲಾಗಿದೆ. ಬಹಳ ಮುಖ್ಯವಾಗಿ ನಮ್ಮ ಮನಸ್ಥಿತಿ ಬದಲಾಗಬೇಕು. ಸಮಾಜದಲ್ಲಿ ಮಹಿಳೆಯರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದ ಅವರು, ಮಹಿಳೆಯರು ದೌರ್ಜನ್ಯ ನಡೆದಾಗ ಖಂಡಿಸಿ, ದೂರು ಕೊಡುವ ಧೈರ್ಯ, ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ (ವಿರೋಧ, ನಿಬಂರ್ಧನೆ ಹಾಗೂ ನಿವಾರಣೆ) ಕಾಯ್ದೆ 2013ರ ಕುರಿತು ಹಿರಿಯ ವಕೀಲರಾದ ಡಿ.ಕೆ.ಶೀಲಾ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಮಹಿಳಾ ಅಭಿವೃದ್ಧಿ ಅಧಿಕಾರಿ ಗಂಗಾಧರಪ್ಪ ಸೇರಿದಂತೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ































