ಚಿತ್ರದುರ್ಗ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ-4 ತಿಂಗಳು ತರಬೇತಿ, 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ-4 ತಿಂಗಳ ತರಬೇತಿ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಕರಿಗೆ 5 ತಿಂಗಳ ತರಬೇತಿ ನೀಡಲಾಗುವುದು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಹಾಗೂ ಬೆಂಗಳೂರಿನ ಐಹೆಚ್ಎಂ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಡಿಸೆಂಬರ್ 01 ರಂದು ಪ್ರಾರಂಭವಾಗುತ್ತಿರುವುದರಿಂದ ಅರ್ಜಿಯನ್ನು ನವೆಂಬರ್ 25 ರಿಂದ 29 ರವರೆಗೆ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು. ಸೇವಾ ಸಿಂಧೂ ವೆಬ್ಸೈಟ್ sevasindhu.karnataka.gov.in/sevasindhu/English ನಲ್ಲಿಯೂ ಸಹ ಅರ್ಜಿಯನ್ನು ಸಲ್ಲಿಸಬಹುದು.
ತರಬೇತಿ ಪಡೆಯಲು ಆಸಕ್ತ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ರವರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.































