ಬೆಂ.ಗ್ರಾ.ಜಿಲ್ಲೆ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ.
ಇದರ ಪರಿಣಾಮವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್. 29 ರಿಂದ ಡಿಸೆಂಬರ್. 02 ರ ವರೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ.































