ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಮಾನ್ಯ ಸರ್ವೋಚ್ಚ ನ್ಯಾಯಾಲಯವು ಉಮೇಶ್ ಕುಮಾರ್ ನಾಗಪಾಲ್ ವಿರುದ್ಧ ಹರಿಯಾಣ ರಾಜ್ಯ ಮತ್ತು ಇತರರು (1994) 4 SCC 138) ಪ್ರಕರಣದಲ್ಲಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ, ಸರ್ಕಾರ ದಿನಾಂಕ: 12.09.1996 ರ ಉಲ್ಲೇಖ (1) ರ ಅಧಿಸೂಚನೆಯಲ್ಲಿ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996 ನ್ನು ರಚಿಸಿದ್ದು ಈ ನಿಯಮಗಳು ದಿನಾಂಕ 13.09.1996 ರಿಂದ ಜಾರಿಗೆ ಬಂದಿರುತ್ತವೆ.
ಈ ನಿಯಮಗಳನ್ನು ಕಾಲ ಕಾಲಕ್ಕೆ ತಿದ್ದುಪಡಿ ಮಾಡಲಾಗಿರುತ್ತದೆ. ದಿನಾಂಕ 09.04.2021 ರ ಉಲ್ಲೇಖ (2) ರ ಅಧಿಸೂಚನೆಯಲ್ಲಿ 1996 ರ ಸದರಿ ನಿಯಮಗಳಿಗೆ ವ್ಯಾಪಕವಾದ ತಿದ್ದುಪಡಿಗಳನ್ನು ಮಾಡಲಾಗಿರುತ್ತದೆ. ಈ ನಿಯಮಗಳನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ದಿನಾಂಕ 12.11.2024 ರ ಉಲ್ಲೇಖ (3) ರ ಸುತ್ತೋಲೆಯಲ್ಲಿ ಮತ್ತು ದಿನಾಂಕ 13.01.2025 ರ ಉಲ್ಲೇಖ (4) ರ ಸುತ್ತೋಲೆಯಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ.






























