ಬೆಂಗಳೂರು : ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಐಟಿ ಇಲಾಖೆ ನೀಡಿದ್ದ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಟ ಯಶ್ ಗೆ 2013-14 ರಿಂದ 2018-19ರ ಅವಧಿಗೆ ಐಟಿ ಇಲಾಖೆ ನೀಡಿದ್ದ ನೋಟಿಸ್ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಐಟಿ ಇಲಾಖೆಯ ನೋಟಿಸ್ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ನಟ ಯಶ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

































