ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ. ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು, ತೀವ್ರ ಅನಾರೋಗ್ಯ ಉಂಟಾದ ಪರಿಣಾಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪಾಟೀಲ್ 1980 ರಿಂದ 2004 ರವರೆಗೆ ಸತತವಾಗಿ ಏಳು ಬಾರಿ ಲಾತೂರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 1980, 1984, 1989, 1991, 1996, ೧೯೯೮ ಮತ್ತು 1999 ರಲ್ಲಿ ಲಾತೂರ್ ಕ್ಷೇತ್ರವನ್ನು ಗೆದ್ದಿದ್ದರು. ನಂತರ 2004 ರಲ್ಲಿ ಬಿಜೆಪಿಯ ರೂಪತೈ ಪಾಟೀಲ್ ನೀಲಂಗೇಕರ್ ವಿರುದ್ಧ ಸೋತಿದ್ದರು. 1972 ಮತ್ತು 1978 ರಲ್ಲಿ ಲಾತೂರ್ ವಿಧಾನಸಭಾ ಕ್ಷೇತ್ರವನ್ನೂ ಗೆದಿದ್ದರು.
ಪಾಟೀಲ್ ರಾಜಕೀಯ ಜೀವನದಲ್ಲಿ, ಹಲವಾರು ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಿದ್ದರು. ಲಾತೂರ್ ನಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 2008 ರಲ್ಲಿ ಪಾಟೀಲ್ ದೇಶದ ಗೃಹ ಸಚಿವರಾಗಿದ್ದರು. ಭದ್ರತಾ ಲೋಪಗಳ ಬಗ್ಗೆ ಟೀಕೆಗಳು ಬಂದ ನಂತರ ಅವರು ರಾಜೀನಾಮೆ ನೀಡಿದ್ದರು.































