ನವದೆಹಲಿ : ವಂದೇ ಮಾತರಂ ಮತ್ತು ಚುನಾವಣಾ ಸುಧಾರಣೆಗಳ ವಿಷಯಗಳ ಬಗ್ಗೆ ಸರ್ಕಾರವು ವಿರೋಧ ಪಕ್ಷಗಳಿಂದ ‘ಒತ್ತಡದಲ್ಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ವಂದೇ ಮಾತರಂ ಮತ್ತು ಚುನಾವಣಾ ಸುಧಾರಣೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಸಂಸದರ ಕಾರ್ಯಕ್ಷಮತೆಯನ್ನು ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ. ಈ ಎರಡೂ ವಿಷಯಗಳ ಬಗ್ಗೆ ಸರ್ಕಾರವು ವಿರೋಧ ಪಕ್ಷಗಳಿಂದ ಒತ್ತಡದಲ್ಲಿದೆ ಎಂದು ರಾಹುಲ್ ಸಭೆಯಲ್ಲಿ ಹೇಳಿದ್ದಾಗಿ ಪಕ್ಷದ ಮೂಲಗಳು ತಿಳಿಸಿವೆ.
ವಂದೇ ಮಾತರಂ ಕುರಿತ ಚರ್ಚೆಯು ಎರಡೂ ಸದನಗಳಲ್ಲಿ ಮುಗಿದಿದ್ದರೂ, ಚುನಾವಣಾ ಸುಧಾರಣೆಗಳ ಕುರಿತ ಚರ್ಚೆ ಇನ್ನೂ ರಾಜ್ಯಸಭೆಯಲ್ಲಿ ನಡೆಯುತ್ತಿದೆ.































