ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತವಾಗುತ್ತಿದ್ದು, ರಾಜ್ಯದ 14 ಜಿಲ್ಲೆಗಳಲ್ಲಿ ಸೋಮವಾರ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಇನ್ನಷ್ಟು ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






























