ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದಸಾವಿನ ಪ್ರಮಾಣ ಮುಂದುವರಿದಿದೆ. ಬಾಳಿ ಬದುಕಬೇಕಾದವರು ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನ ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು.
ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಡಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
































