ಚಿತ್ರದುರ್ಗ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾಗಾಂಧಿ, ರಾಹುಲ್ಗಾಂಧಿ ವಿರುದ್ದ ಬಿಜೆಪಿ. ಪಿತೂರಿ ನಡೆಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ. ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ್ದನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಸಿಟ್ಟಿಗೆದ್ದು, ನೂಕಾಟದಲ್ಲಿ ತೊಡಗಿದರು. ಕೆಲವರು ಬ್ಯಾರಿಕೇಡ್ಗಳನ್ನು ಹತ್ತಿ ಒಳ ನುಗ್ಗಲು ಬಂದಾಗ ಪೊಲೀಸರು ವಿಫಲಗೊಳಿಸಿದ್ದರಿಂದ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕಾಳಿಕಾಂಭ ದೇವಸ್ಥಾನದ ಸಮೀಪದಲ್ಲಿರುವ ಬಿಜೆಪಿ. ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತಿಗೆ ಹಾಕುವುದಕ್ಕಿಂತ ಮುಂಚೆಯೇ ಬ್ಯಾರಿಕೇಡ್ಗಳನ್ನು ಅಡ್ಡವಿಟ್ಟು ಪೊಲೀಸರು ಕಾಯುತ್ತಿದ್ದರು. ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ಏರಿ ಒಳ ಸುಸುಳಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹೆಚ್.ಆಂಜನೇಯ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಮೊದಲಿನಿಂದಲೂ ನೆಹರು, ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್ಗಾಂಧಿ ವಿರುದ್ದ ಸೇಡಿನ ರಾಜಕಾರಣ ಮಾಡುತ್ತಿರುವ ಬಿಜೆಪಿ.ಗೆ ಅವನತಿಯ ಕಾಲ ಸಮೀಪಿಸುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಗೆ ತ್ಯಾಗ ಬಲಿದಾನದ ಇತಿಹಾಸವಿದೆ. ವಾಮ ಮಾರ್ಗದಲ್ಲಿ ಅಧಿಕಾರವಿಡಿದಿರುವ ಕೋಮುವಾದಿ ಬಿಜೆಪಿ. ದೇಶದ ಜನರ ಹಿತ ಕಾಯುವ ಬದಲು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿಯನ್ನು ಸಿಲುಕಿಸಲು ಕುತಂತ್ರ ನಡೆಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆಂದರು.
ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದರು ಬಿಜೆಪಿ. ದ್ವೇಷದ ರಾಜಕಾರಣ ಮಾಡುತ್ತ ಕಾಲ ಕಳೆಯುತ್ತಿದ್ದು, ಕಾಂಗ್ರೆಸ್ ನಾಯಕರುಗಳನ್ನು ಗುರಿಯಾಗಿಸಿಕೊಂಡು ಇಲ್ಲ ಸಲ್ಲದ ಆಪಾದನೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಉಗ್ರ ಹೋರಾಟ ನಡೆಯಲಿದೆ ಎಂದು ಹೆಚ್.ಆಂಜನೇಯ ಎಚ್ಚರಿಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ
ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಸಿ.ಟಿ.ಕೃಷ್ಣಮೂರ್ತಿ, ಹೆಚ್.ಮಂಜಪ್ಪ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಹೆಚ್.ಅಂಜಿನಪ್ಪ, ಮೆಹಬೂಬ್ಖಾತೂನ್, ಫರ್ವಿನ್, ಸೈಯದ್ ಖುದ್ದೂಸ್, ಎ.ಸಾಧಿಕ್ವುಲ್ಲಾ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಯು.ಲಕ್ಷ್ಮಿಕಾಂತ್, ಪ್ರಕಾಶ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಹೆಚ್.ಶಬ್ಬೀರ್ಭಾಷ, ಸೈಯದ್ ಅಫಾಖ್ ಅಹಮದ್, ಮಹಮದ್ ಆಜಾಂ, ಮುದಾಸಿರ್ ನವಾಜ್, ಚಾಂದ್ಪೀರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
































