ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಈರಗನಹಳ್ಳಿ ಗ್ರಾಮದ ಎಸ್.ನಾಗರಾಜ ಅವರಿಗೆ ಹರಿದಾಸ ಸಾಹಿತ್ಯದಲ್ಲಿ ಹೆಳವನಕಟ್ಟೆ ಗಿರಿಯಮ್ಮ: ಭಕ್ತಿ ಮತ್ತು ಪ್ರಾದೇಶಿಕತೆ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿದಕ್ಕಾಗಿ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಭೀಮಾಶಂಕರ ಜೋಶಿ ಅವರ ಮಾರ್ಗದರ್ಶನದಲ್ಲಿ ನಾಗರಾಜ ಅವರು ಸಂಶೋಧನೆ ನಡೆಸಿದ್ದರು.
































