ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸ್ಲೀಪರ್ ಕೋಚ್ ಭೀಕರ ರಸ್ತೆ ಅಪಘಾತ ದಿಂದ 17ಕ್ಕೂ ಹೆಚ್ಚು ಜನ ಸಜೀವ ದಹನ ಸಾವನ್ನಪ್ಪಿದ್ದಾರೆ.!
ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.
ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಾಗಿದೆ. ಬಸ್ ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

































