ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿOಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿOಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಬೆಂಗಳೂರಿನಿOದ ಬುಧವಾರ ರಾತ್ರಿ ಬಸ್ ಹತ್ತಿ ಹೊರಟಿದ್ದರು. ಅಪಘಾತದಲ್ಲಿ ಕಣ್ಮರೆಯಾಗಿದ್ದು, ಚಿತ್ರದುರ್ಗದ ಹಿರಿಯೂರಿನತ್ತ ಯುವತಿಯರ ಪೋಷಕರು ತೆರಳಿದ್ದಾರೆ.
































