ಚಿತ್ರದುರ್ಗ : ಕೆಳಗೋಟೆ ತಿಪ್ಪಜ್ಜಿ ಸರ್ಕಲ್ನಲ್ಲಿರುವ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ 23 ನೇ ವರ್ಷದ ವೈಕುಂಠ ಏಕಾದಶಿ ಪ್ರಯುಕ್ತ ಡಿ.30 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಬೆಳಿಗ್ಗೆ 6 ಗಂಟೆಯಿಂದ ಸ್ವಾಮಿಯ ಪ್ರಾಕಾರೋತ್ಸವ, ಉತ್ತರ ಬಾಗಿಲು ಪೂಜೆ, ಅಲಂಕಾರ ಸೇವೆ ಏರ್ಪಡಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರಸ್ವಾಮಿ ದರ್ಶನ ಪಡೆಯುವಂತೆ ತಿಮ್ಮಪ್ಪ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಡಿ.ತಿಮ್ಮಣ್ಣ ಮನವಿ ಮಾಡಿದ್ದಾರೆ.































