ಲಕ್ನೋ: ಯಾವುದೇ ತರಬೇತಿ ಕೇಂದ್ರಕ್ಕೆ ತೆರಳಿ ಕೋಚಿಂಗ್ ಪಡೆಯದೆ, ಕೇವಲ ಸ್ವಯಂ ಅಧ್ಯಯನ ಮತ್ತು ಪರಿಶ್ರಮದ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಐಎಎಸ್ ಅಧಿಕಾರಿ ಮುಸ್ಕಾನ್ ಶ್ರೀವಾಸ್ತವ ಅವರ ಯಶೋಗಾಥೆ ಇದು.
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಿವಾಸಿಯಾಗಿರುವ ಮುಸ್ಕಾನ್ ಅವರ ಇವರ ತಂದೆ ಪಶುಸಂಗೋಪನಾ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಗೃಹಿಣಿ. ಅವರು ಸ್ಥಳೀಯ ಶಾಲೆಗಳಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿದರು. ನಂತರ ಜಬಲ್‌ಪುರದ ಐಐಟಿಯಲ್ಲಿ ಬಿ.ಟೆಕ್ ಪದವಿ ಪಡೆದರು.
ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಮುಸ್ಕಾನ್ ಅವರು ಯಾವುದೇ ತರಬೇತಿ ಕೇಂದ್ರಗಳಿಗೆ ತೆರಳಿದೆ ಸ್ವಯಂ ಅಧ್ಯಯನ ಮಾಡಿದರು. ಮುಸ್ಕಾನ್ ದಿನಕ್ಕೆ 10 ರಿಂದ 12 ಗಂಟೆಗಳ ಕಾಲ ಅಧ್ಯಯನ ಮಾಡುತ್ತಿದ್ದರು.
2025ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಮುಸ್ಕಾನ್ ಅವರು, 36ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಈ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ. ಅವರ ನಿರಂತರವಾದ ಪರಿಶ್ರಮವೇ ಯಶಸ್ಸಿಗೆ ಕಾರಣವಾಗಿದ್ದು, ಅನೇಕ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಮಾದರಿಯಾಗಿದ್ದಾರೆ.
































