ಚಿತ್ರದುರ್ಗ : 1818ರ ಜನವರಿ 1ರಂದು ಸಂಭವಿಸಿದ ಆ ಐತಿಹಾಸಿಕ ವಿಜಯವು ಕೇವಲ ಒಂದು ಯುದ್ಧದ ಗೆಲುವಲ್ಲ; ಅದು ಜಾತಿವಾದದ ವಿರುದ್ಧ ಸ್ವಾಭಿಮಾನದಿಂದ ಗಳಿಸಿದ ಮಹಾನ್ ಜಯ, ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಅಮೂಲ್ಯ ಮೈಲಿಗಲ್ಲು ಎಂದು ಸಾಹಿತಿ ಆನಂದಕುಮಾರ್ ತಿಳಿಸಿದರು.
ಚಿತ್ರದುರ್ಗ ನಗರದ ಮೆಜಸ್ಟಿಕ್ ವೃತ್ತದಲ್ಲಿನ ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾ ಪಡೆವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ವಿಜಯೋತ್ಸವ ಹಾಗೂ ಹೊಸವರ್ಷದ ಸಂಭ್ರಮಾಚರಣೆ ಅಂಗವಾಗಿ ಬಸವ ಬುದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭೀಮಾ ಕೋರೆಗಾಂವ್ ವಿಜಯೋತ್ಸವ ಶೌರ್ಯ ಹಾಗೂ ತ್ಯಾಗದ ಸ್ಮರಣೆಯೊಂದಿಗೆ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಮತ್ತು ಪ್ರೇರಣಾದಾಯಕವಾಗಿ ಬರಮಾಡಿ ಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿ 1818 ಅದು ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತದ ಕಾಲ. ಆಗಿನ ಪೇಶ್ವೆ ಮಂತ್ರಿ 2ನೆ ಬಾಜೀರಾಯ. ಸಾಮಾಜಿಕ ದುಸ್ಥಿತಿಯ ಸಂದರ್ಭದಲ್ಲಿ ಮಹರಾಷ್ಟ್ರದ ಅಸ್ಪಶ್ಯರಾದ ಮಹಾರರಿಗೆ ದೌರ್ಜನ್ಯಕೋರ ಇಂತಹ ಪೇಶ್ವೆಗಳ, ಮತ್ತವರ ಸಾಮ್ರಾಜ್ಯದ ವಿರುದ್ಧ ಹೋರಾಡುವ ಅದ್ಭುತ ಅವಕಾಶವೊಂದು ಬರುತ್ತದೆ. ಅದೇ ಕೋರೇಗಾಂವ್ ಯುದ್ಧ! ಅಂಬೇಡ್ಕರರ ಪ್ರಕಾರವೇ ಹೇಳುವುದಾದರೆ “ಮರಾಠರ ರಾಜ್ಯದಲ್ಲಿ ಪೇಶ್ವೆಗಳ ಆಡಳಿತದಲ್ಲಿ, ಅಸ್ಪಶ್ಯರ ನೆರಳು ಹಿಂದೂವೊಬ್ಬನ ಮೇಲೆ ಬಿದ್ದು ಆತ ಮಲಿನವಾಗುವುದನ್ನು ತಪ್ಪಿಸಲು ಸಾರ್ವಜನಿಕ ಬೀದಿಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಈ ಬಗೆಯ ಸಾಮಾಜಿಕ ಅಸಮತೋಲನದ ವಿರುದ್ದ ದಮನಿತ ಸಮುದಾಯ ಸಿಡಿದೆದ್ದು ವಿಜೇತರಾದ ದಿನ ಎಂದರು.
ಕೋರೇಗಾಂವ್ ಯುದ್ದ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆಯಾಗಿದ್ದು, ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ `ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ ಎಂದರು.
ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ. ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ ಬಗ್ಗೆಯಷ್ಟೆ ಚರಿತ್ರೆ ದಾಖಲಿಸಲಾಗಿದೆ. ಆದರೆ ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು ದಾಖಲಿಸಿದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ! ಇತಿಹಾಸ ಕೃತಿಯ ಯಾವ ಪುಟದಲ್ಲೂ ಅಂತಹದ್ದೊಂದು ಯುದ್ಧದ ಬಗ್ಗೆ ಉಲ್ಲೇಖವಿಲ್ಲ. ಶೋಷಿತರು ಶೋಷಕ ಶಕ್ತಿಗಳ ವಿರುದ್ಧ ಸಾರಿದ ಯುದ್ಧ ಕೋರೇಗಾಂವ್ ಯುದ್ಧ.[4] ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ `ಭೀಮಾ ಕೋರೇಗಾಂವ್ ಯುದ್ಧವೆಂದೇ ಪ್ರಸಿದ್ಧವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನಗರಸಭಾ ಮಾಜಿ ಅಧ್ಯಕ್ಷರಾದ ಹೆಚ್,ಮಂಜಪ್ಪ ಟಿಪ್ಪು ಸುಲ್ತಾನ್ ಸಂಘದ ರಾಜ್ಯಧ್ಯಕ್ಷರಾದ ಖಾಸಿಂ ಆಲಿ, ಜಿ.ಪಂ. ಮಾಜಿ ಅಧ್ಯಕ್ಷರಾದ ಮಹಾಲಿಂಗಪ್ಪ, ಜನಶಕ್ತಿ ಸಂಘದ ಷಫಿವುಲ್ಲಾ, ನಗರಸಭೆ ಮಾಜಿ ಸದಸ್ಯರಾದ ಗಾಡಿ ಮಂಜುನಾಥ್, ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾ ಪಡೆವತಿಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜನ್ (ಪಾರ್ಥ) ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು, ತದ ನಂತರ ಬಾಬಾ ಸಾಹೇಬ್ ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪ ಹಾರವನ್ನು ಹಾಕಿ ಗೌರವ ಸಲ್ಲಿಸಲಾಯಿತು.

































