ಕಲಬುರಗಿ: ಕಲಬುರಗಿ ಜೈಲಿನಲ್ಲಿ ಕೈದಿಗಳು ಸಿಗರೇಟ್, ಮದ್ಯ ಸೇವನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೈದಿಗಳಾದ ಆಕಾಶ್, ರಾಕೇಶ್, ಪ್ರಜ್ವಲ್, ಮುನಿಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜೈಲಿನಲ್ಲಿ ಜೂಜಾಡುತ್ತಾ ಸಿಗರೇಟ್, ಮದ್ಯ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಜೈಲು ಮುಖ್ಯ ಅಧಿಕ್ಷಕಿ ಡಾ.ಅನಿತಾ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ.
ನಾಳೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಒಟ್ಟಾರೆ ಕಲಬುರಗಿ ಜೈಲಿನಲ್ಲಿ ಕೈದಿಗಳ ಆಟಾಟೋಪ ಮತ್ತೆ ಮತ್ತೆ ಸುದ್ದಿಯಾಗುತ್ತಿದ್ದು, ಬ್ರೇಕ್ ಹಾಕುವ ನಿಟ್ಟಿನಲ್ಲಿ ನಾಳೆ ಸ್ವತಃ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಲಿದ್ದಾರೆ.

































