ಧಾರವಾಡ : ಧಾರವಾಡ ನಗರದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೋಳಿಕೆರೆ ಬಡಾವಣೆಯ ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಪೋಟದ ರಭಸಕ್ಕೆ ಮನೆಯ ಗೋಡೆಗಳು ಪುಡಿ ಪುಡಿಯಾಗಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

































