ತುಮಕೂರು: ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಪವನ್ ನಿಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತುಮಕೂರು ಜಿಲ್ಲೆ ಶಿರಾದ ಬರಗೂರಿನ ಸ್ನೇಹಿತರೊಬ್ಬರ ಫಾರ್ಮ್ ಹೌಸ್‌ನಲ್ಲಿ ಮಾತ್ರೆಗಳನ್ನು ಸೇವಿಸುವ ಮೂಲಕ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.


































