ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ಸೌಮ್ಯ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪಿಹೆಚ್.ಡಿ ಪದವಿ ನೀಡಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಆರ್.ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ಇಂಪ್ಯಾಕ್ಟ್ ಆಫ್ ಜಿಎಸ್‍ಟಿ ಎಫ್‍ಎಂಸಿಜಿ ಸೆಕ್ಟಾರ್ ಇನ್ ಇಂಡಿಯಾ” ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದಾರೆ.
































