ಮಂಗಳೂರು ಡ್ರಗ್ಸ್ ಪೆಡ್ಲರ್ ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆ ಬಂಧನ.
ಮಂಗಳೂರು ಯುವಕರಿಗೆ ಡ್ರಗ್ಸ್ ಪೂರೈಕೆ ಮಾಡುತಿದ್ದ 6 ಜನ ಡ್ರಗ್ ಪೆಡ್ಲರ್ ಗಳಿಗೆ, ವ್ಯವಸ್ಥಿತವಾಗಿ ಬೆಂಗಳೂರಿನಿಂದ ಡ್ರಗ್ಸ್ ಪೂರೈಕೆ ಮಾಡುತಿದ್ದ ಉಗಾಂಡಾ ಮೂಲದ ಮಹಿಳೆಯನ್ನ 4 ಕೆಜಿ MDM ನೊಂದಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದು, ಮಂಗಳೂರು ಪರಿಸರಕ್ಕೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೊಂಡಿಯನ್ನ ಬಂಧಿಸಿದ್ದಾರೆ.
ಈಗಾಗಲೇ 6 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದು , ಅವರು ಜೈಲಿನಲ್ಲಿ ಇದ್ದು, ಇವರನ್ನ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ವಿವರಣೆ ಮಾಡಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ.

































