ದಾವಣಗೆರೆ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಮೈಲಾರ ಗ್ರಾಮದ ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಜನವರಿ 20 ರಿಂದ 30 ರವರೆಗೆ 500 ಕ್ಯೂಸೆಕ್ಸ್ ನೀರು ಹರಿಸಲಾಗುವುದು.
ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
































