ಗದಗ: ಹೌದು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಹಟ್ಟಿ ದಯಾಮರಣಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದವರು
ಕಾರಣ ಮೇಲಾಧಿಕಾರಿಗಳ ಕಿರುಕುಳ, ವೇತನ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದು, ಜೀವನ ನಿರ್ವಹಣೆಯೂ ಕಷ್ಟ ಸಾಧ್ಯವಗುತ್ತಿದೆ. ತನಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.!
ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸಂಕಟ ಅನುಭವಿಸುತ್ತಿದ್ದೇನೆ. ದಯವಿಟ್ಟು ದಯಾಮರಣ ನೀಡುವ ಮೂಲಕ ನನ್ನನ್ನು ದು:ಸ್ಥಿತಿಯಿಂದ ಮುಕ್ತಿಗೊಳಿಸಿ ಎಂದು ಯೋಗೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

































