ಬೆಂಗಳೂರು: ಫೆಬ್ರವರಿಯಿಂದ ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಈಗಾಗಲೇ ಲೆಕ್ಕಾಚಾರಗಳು ನಡೆಯುತ್ತಿದೆ. ಶೇಕಡಾ 5ರಷ್ಟು ಟಿಕೆಟ್ ದರ ಏರಿಕೆ ಮಾಡಲಾಗುತ್ತದೆ. ಈ ಕುರಿತು ಮಹತ್ವದ ಸಭೆ ನಡೆದಿದೆ. ನಮ್ಮ ಮೆಟ್ರೋ ದರ ಏರಿಕೆ ನಿಯಮದಂತೆ ಪ್ರತಿ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿದೆ.
ನಮ್ಮ ಮೆಟ್ರೋ ದರ ಏರಿಕೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಕಳೆದ ವರ್ಷದ ದರ ಏರಿಕೆಯಿಂದ ಇನ್ನು ಜನಸಾಮಾನ್ಯರು ಚೇತರಿಸಿಕೊಂಡಿಲ್ಲ. ಇದರ ಬೆನ್ನಲ್ಲೇ ಮತ್ತೆ ಶೇಕಡಾ 5ರಷ್ಟು ದರ ಏರಿಕೆ ಹೊರೆಯಾಗಲಿದೆ ಎಂದು ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಮ್ಮ ಮೆಟ್ರೋ ದರ ಏರಿಕೆ ಇದೀಗ ಸರ್ಕಾರದ ಅಂಗಳ ತಲುಪಿದೆ.

































