ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

































