ವರದಿ: ಭರತ್ ಕುಮಾರ್ ಬಿಎನ್
ಬೆಂ.ಗ್ರಾ ಜಿಲ್ಲೆ: ಭಾರತ ದೇಶದಲ್ಲಿ ಸುಮಾರು 42 ಕೋಟಿ ಅಸಂಘಟಿತ ವಲಯದ ಕಾರ್ಮಿಕರಿದ್ದಾರೆ. ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದಿಂದ ಬರುತ್ತಿದೆ. ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ಜೀವನದ ಸಂಧ್ಯಾ ಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮ್ ಯೋಗಿ ಮಾನ್-ಧನ್(ಪಿಎಂ-ಎಸ್ ವೈಎಂ)ಎಂಬ ಮಹಾತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.
ದೈನಂದಿನ ಜೀವನದಲ್ಲಿ ಕಂಡುಬರುವ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವರು, ಮನೆಕೆಲಸದವರು, ಅಗಸರು, ಆಟೋ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮ ಕಾರ್ಮಿಕರು, ಧ್ವನಿ ಮತ್ತು ದೃಶ್ಯಕಾರ್ಮಿಕರು ಸೇರಿದಂತೆ ಇದೇ ರೀತಿಯ ಇತರೆ ಕ್ಷೇತ್ರಗಳಲ್ಲಿ ಅಸಂಘಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವವವರು ಪಿಂಚಣಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಪಿಂಚಣಿ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು
ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷಗಳ ವಯೋಮಿತಿ ಒಳಗಿರಬೇಕು. ಅವರ ಮಾಸಿಕ ಆದಾಯವು 15000/- ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ, ಇಸ್ಐ, ಪಿಎಫ್, ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು.
ಫಲಾನುಭವಿಗಳ ನೋಂದಣಿ ವಿಧಾನ
- ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್ಐ ಕಾರ್ಪೊರೇಷನ್ ಹಾಗೂ ಭವಿಷ್ಯ ನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವಿಳಾಸಗಳು ಹಾಗೂ ವೆಬ್ಸೈಟ್ ವಿಳಾಸ https://locator.csccloud.in ಗಳಲ್ಲಿ ಪಡೆಯಬಹುದಾಗಿರುತ್ತದೆ.
- ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮತ್ತು ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್ ಮೆಂಟ್), ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್ಸೆಟ್ ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್ ಗಳಿಗೆ ಬರುವುದು.
- ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ತದನಂತರದ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ ಡೆಬಿಟ್ ಮೂಲಕ ಕಟ್ ಮಾಡಿಕೊಳ್ಳಲಾಗುತ್ತದೆ.
ಯೋಜನೆಯ ಸೌಲಭ್ಯಗಳು
ಕೇಂದ್ರ ಸರ್ಕಾರವು ಚಂದದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3000ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ ಚಂದದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ ಹತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚು ಅದನ್ನು ಪಾವತಿಸಲಾಗುವುದು ಫಲಾನುಭವಿಯು ನಿರಂತರವಾಗಿ ಒಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ವಿಕಲತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ ಅವಳ ಸಂಗಾತಿ ಯುದ್ಧದ ನಂತರ ಈ ಯೋಜನೆಗೆ ಸೇರಬಹುದಾಗಿತ್ತು ಒಂತಿಕೆಯನ್ನು ಪಾವತಿಸಿ ಮುಂದುವರೆಸಬಹುದಾಗಿರುತ್ತದೆ ಅಥವಾ ಅವರವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ ಅವರ ಪತ್ನಿ ಅಥವಾ ಪತಿ ಮಾತ್ರ ಪಿಂಚಣಿಯ ಶೇಕಡ 50ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು ಎಂಎಸ್ಎಂಎಸ್ ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲಕಾಲಕ್ಕೆ ತಿಳಿಸಲಾಗುವುದು.
ಸಂಪರ್ಕಿಸಬೇಕಾದ ವಿಳಾಸಗಳು
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್.ಐ.ಸಿಯ ಶಾಖಾ ಕಚೇರಿಗಳು, ಇಪಿಎಫ್ ಮತ್ತು ಇ.ಎಸ್.ಐ.ಸಿ ಕಚೇರಿಗಳು, ಅಥವಾ ಟೋಲ್ ಫ್ರೀ ಕಾಲ್ ಸೆಂಟರ್ ಸಂಖ್ಯೆ 18002676888, ಎಲ್ಐಸಿ ವೆಬ್ಸೈಟ್ ವಿಳಾಸ www.licindia.in, ಸಮೀಪದ ಸಿಎಸ್ಸಿ ಸೆಂಟರ್ ಗಳಿಗಾಗಿ https://locator.csccloud.in , ಹೆಚ್ಚಿನ ಮಾಹಿತಿಗಾಗಿ maandhan.in, ಕಾರ್ಮಿಕ ಸಹಾಯವಾಣಿ 155214 (24×7) ಸಂಪರ್ಕಿಸಬಹುದಾಗಿದೆ.

































