ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸತತ ಐದು ವರ್ಷಗಳ ಕಾಲ ಅಪಘಾತ ರಹಿತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಿತ್ರದುರ್ಗ ಘಟಕದ ಚಾಲಕ ಆರ್.ಮನೋಹರ ಅವರಿಗೆ ‘ಬೆಳ್ಳಿ ಪದಕ’ ನೀಡಿ ಗೌರವಿಸಲಾಯಿತು.
ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಚಾಲಕ ಆರ್.ಮನೋಹರ್ ಅವರಿಗೆ ಬೆಳ್ಳಿ ಪದಕ ಪ್ರದಾನ ಮಾಡಿದರು.
ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ವತಿಯಿಂದ ನೀಡಲಾಗುವ 2022ನೇ ಸಾಲಿನ ಈ ಪ್ರಶಸ್ತಿಯು ಬೆಳ್ಳಿ ಪದಕ, ಪ್ರಶಂಸನಾ ಪತ್ರ ಹಾಗೂ ರೂ. 2,000 ನಗದು ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.
































