ಮುಂಬೈ: ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಅಜಿತ್ ಪವಾರ್ ಬಾರಾಮತಿ ಬಳಿ ನಡೆದ ಖಾಸಗಿ ವಿಮಾನ ಅಪಘಾತದಲ್ಲಿ ಜನವರಿ 28, 2026ರ ಬುಧವಾರ ಸಾವನ್ನಪ್ಪಿದ್ದಾರೆ.
ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾರಾಷ್ಟ್ರ ರಾಜ್ಯದ ಆಡಳಿತಾರೂಢ ‘ಮಹಾಯತಿ’ ಮಹಾಯತಿ ಮೈತ್ರಿಕೂಟದ ಭಾಗವಾಗಿದೆ. 2024ರ ವಿಧಾನಸಭೆ ಚುನಾವಣೆಯಲ್ಲಿ 41 ಸೀಟುಗಳಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜಯಗಳಿಸಿದೆ.
ಮಹಾಯತಿ ಸರ್ಕಾರ ರಚನೆಗೆ ಬಿಜೆಪಿಗೆ ಪಕ್ಷ ಬೆಂಬಲ ನೀಡಿದೆ. ಆದ್ದರಿಂದ ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ. ಈ ಹಿಂದೆ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗಲೂ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿದ್ದರು.
































