ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ತೀರ್ಪು ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಪೂರ್ವಾನ್ವಯವಾಗುವಂತೆ ಶಿಕ್ಷಕರಿಗೆ ವೇತನ ಸೌಲಭ್ಯ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಸರ್ಕಾರ 2011ರಲ್ಲಿ ಹೊರಡಿಸಿದ್ದ ಆದೇಶದ ಅನ್ವಯ ಅರ್ಜಿದಾರ ಶಿಕ್ಷಕರು ಶಾಲೆಯು ಅನುದಾನಕ್ಕೆ ಒಳಪಟ್ಟ ದಿನದಿಂದಲೇ ವೇತನಕ್ಕೆ ಅರ್ಹರಿದ್ದಾರೆ ಎಂದು ತೀರ್ಪು ನೀಡಿದೆ.

































