ಬೆಂಗಳೂರು : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ ಸಮಾಜದಲ್ಲಿ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ. ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ.
ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.
ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ – ಕಳೆಯಲು ಅನುಕೂಲವಾಗುವಂತೆ ಆ ದಿನ ಸಾಂದರ್ಬಿಕ ರಜೆ ನೀಡಿ ಎಂದು ತಿಳಿಸಲಾಗಿದೆ. ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ(Holiday Order) ಹೊರಡಿಸಿದ್ದಾರೆ.

































