ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತುಪ್ಪ ಬೋನವನುಂಡು, ನಚ್ಚುಮಚ್ಚಿನ ಮಾತ ನುಡಿದು,
ರಚ್ಚೆಯಲ್ಲಿ ಕುಳಿತು ಇಷ್ಟಲಿಂಗವನಪ್ಪಿದವರ ನಿತ್ಯಜ್ಞಾನಿಗಳೆಂದಡೆ
ಪ್ರತ್ಯಕ್ಷವಾಗಿ ಸುರಿಯವೆ ಬಾಯಲ್ಲಿ ಬಾಲಹುಳು ?
ನಿತ್ಯರ ಕಂಡು ನಿಂದಿಸಿ ವಂದಿಸಿದಡೆ
ಪ್ರತ್ಯಕ್ಷವಾಗಿ ಪರಶಿವನ ಶರಣರು ಹೊಟ್ಟೆಯ ಸೀಳದೆ ಮಾಣ್ಬರೆ ?
ಅಮುಗೇಶ್ವರಲಿಂಗವನರಿಯದೆ
ಬರಿಯ ಮಾತಿನಲ್ಲಿ ಅರಿವು ಸಂಬಂಧಿಗಳೆಂದಡೆ,
ನೀವು ಸಾಕ್ಷಿಯಾಗಿ ಮಾರಿಗೆ ಹೊಯಿದ ಕೋಣನ ಕೊರಳ ಕೊಯಿದಂತೆ ಕೊಯ್ವರಯ್ಯಾ.
-ಅಮುಗೆ ರಾಯಮ್ಮ

































