ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

WhatsApp
Telegram
Facebook
Twitter
LinkedIn

ಬೆಂಗಳೂರು : ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತವಾದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಭೂಕಾಂತ್ ಅವರು ಬಿಜೆಪಿ ಹಿನ್ನೆಲೆಯ ನಾಯಕರು ಎನ್ನುವ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರ ಪತ್ನಿಯೂ ಬಿಜೆಪಿ ಪರವಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯೇ ಎಂಬ ಪ್ರಶ್ನೆಗಳು ಪಕ್ಷದ ಒಳಗಿನಿಂದಲೇ ಕೇಳಿಬಂದಿದ್ದವು.

ಇಲ್ಲಿಯವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸರ್ಕಾರ ಈ ಸ್ಥಾನಮಾನವನ್ನು ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಅದರ ಭಾಗವಾಗಿ ಭೂಕಾಂತ್ ಅವರಿಗೆ ಸಹ ಸ್ಥಾನಮಾನ ನೀಡಲಾಗಿತ್ತು.

ಈ ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ಕಾರ್ಯಕರ್ತರ ಅಸಮಾಧಾನ ಹಾಗೂ ಒಳಾಂಗಣ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿದೆ.

ಇದೇ ವೇಳೆ, ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಕೂಡ ಪರೋಕ್ಷವಾಗಿ ಟೀಕೆ ಮಾಡಿದ್ದರು. “ನಮ್ಮದು ಸರ್ವಧರ್ಮ ಪಾಲಿಸಿಯಾಗಿದೆ. ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ ಆದ್ಯತೆ ನೀಡಲಾಗುತ್ತದೆ” ಎಂದು ವ್ಯಂಗ್ಯವಾಗಿ ಹೇಳಿದ್ದರು.

ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರವು ಒಳಪಕ್ಷದ ಒತ್ತಡದ ಫಲವೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon