ಚಿತ್ರದುರ್ಗ : ಚಳ್ಳಕೆರೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಮುಂಬರುವ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಟಿಡಿಎಂ-ಯಾಂತ್ರಿಕ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್-ಮೆಕಾನಿಕಲ್), ಡಿಎಂಸಿಹೆಚ್-ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಬಹುದು ಅಥವಾ ಇ-ಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಜಿಟಿಟಿಸಿ ನಿಯಮಾನುಸಾರ ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7625008641, 8147384716 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.
































