ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ: ಸಹಾಯ ಧನ ಸೌಲಭ್ಯಕ್ಕಾಗಿ ಅರ್ಜಿ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸಹಾಯ ಧನ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 06 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯ ಬಹುದಾಗಿರುತ್ತದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1ರ (ಎ)ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ಧಿಗಾಗಿ ಆಹಾರ ವಾಹಿನಿ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಗರ ಪ್ರದೇಶದ ವಿಧಾನ ಸಭಾ ಕ್ಷೇತ್ರಗಳಾದ ಚಿತ್ರದುರ್ಗ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷದೊಳಗಿರಬೇಕು. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಹೊಂದಾಣಿಕೆಯಾಗಬೇಕು. ಈ ಯೋಜನೆಯಡಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‍ನ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.

ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https:/ kvcdc.karnataka.gov.in/kn/ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕ ರಾಜಗೋಪಾಲ್ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon