ಬೆಂ.ಗ್ರಾ.ಜಿಲ್ಲೆ ರೈತರಿಗೆ ಮುಖ್ಯ ಮಾಹಿತಿ ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

WhatsApp
Telegram
Facebook
Twitter
LinkedIn

ಬೆಂ.ಗ್ರಾ.ಜಿಲ್ಲೆ ರೈತರಿಗೆ ಮುಖ್ಯ ಮಾಹಿತಿ ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

 

ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System)  ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon