ಬಳ್ಳಾರಿ:. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ.
ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.






























