ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಅಧಿಕಾರಿಗಳ ಭೇಟೆ.!

WhatsApp
Telegram
Facebook
Twitter
LinkedIn

 

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.

ಗುರುವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಜಾಲಾಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್,(PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್, ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ , ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್‌ಚಾರ್ಜ್) ಆಶಿಫ್ ಇಕ್ಬಾಲ್, ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಇವರುಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon