ದಾವಣಗೆರೆ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಷ್ಟಪರಿಸ್ಥಿತಿಯಲ್ಲಿದ್ದು ಮಾಸಾಶನ ಪಡೆಯುತ್ತಿರುವ ಸಾಹಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಪಾಸ್ಪೋರ್ಟ್ ಸೈಜ್ ಫೆÇೀಟೋ, ಬ್ಯಾಂಕ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 27, ದಾವಣಗೆರೆ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಮಾರ್ಚ್ 31 ರೊಳಗಾಗಿ ಕಳುಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
































